General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Thursday, July 28, 2022

ಕರ್ನಾಟಕ ಸರ್ಕಾರದ ಪ್ರಮುಖ 5 ಯೋಜನೆಗಳು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, July 28, 2022

ಶೀರ್ಷಿಕೆ: ಕರ್ನಾಟಕ ಸರ್ಕಾರದ ಪ್ರಮುಖ 5 ಯೋಜನೆಗಳು


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಎಸ್ ಸಿ /ಎಸ್ ಐ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ :


ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ಕುಟುಂಬಗಳಿಗೆ ಉಚಿತವಾಗಿ 75 ಯುನಿಟ್ ವರೆಗೆ ಉಚಿತ ವಿದ್ಯುತ್‌ ನೀಡುವ ಯೋಜನೆಯಡಿ ಡಿಬಿಟಿ ವರ್ಗಾವಣೆ ಇಂದಿನಿಂದ ಪ್ರಾರಂಭವಾಗಲಿದೆ. ಸುಮಾರು 25 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಇದಕ್ಕಾಗಿ 700 ಕೋಟಿ ರೂ. ಒದಗಿಸಲಾಗಿದೆ.


ಸ್ವಯಂ ಉದ್ಯೋಗ ಯೋಜನೆ :


ಬಾಬು ಜಗಜೀವನ್ ರಾಂ ಅವರ ಹೆಸರಿನಲ್ಲಿ ಸ್ವಯಂ ಉದ್ಯೋಗ ಯೋಜನೆ : ಪ್ರತಿಯೊಂದು ಕ್ಷೇತ್ರದಲ್ಲಿ 100 ಪರಿಶಿಷ್ಟ ಜಾತಿ/ ಪಂಗಡದ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಗೆ ಚಾಲನೆ.


8000 ಶಾಲಾ ಕೊಠಡಿಗಳ ನಿರ್ಮಾಣ :


ಶಿಕ್ಷಣ ಹಾಗೂ ಅದರ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, 'ವಿವೇಕ' ಯೋಜನೆಯಡಿ ಮೊದಲ ಬಾರಿಗೆ 8000 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ.


ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ :


ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣಗೊಳಿಸುವ ಯೋಜನೆಗೆ ಚಾಲನೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 71 ಪಿಹೆಚ್ಚಿ ಗಳನ್ನು ರಾಜ್ಯದ ಸರಾಸರಿಗಿಂತ ಕಡಿಮೆ ಸೂಚ್ಯಂಕ ಇರುವ ಪ್ರದೇಶಗಳಲ್ಲಿ ಸ್ಥಾಪಿಸಲಾಗುವುದು.


'ಸ್ತ್ರೀ ಸಾಮರ್ಥ್ಯ' ಯೋಜನೆ :


ಸ್ತ್ರೀಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ 1.50 ಲಕ್ಷ ರೂ. ನೀಡುವ ಜೊತೆಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸಲು ಆಂಕರ್ ಬ್ಯಾಂಕ್ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡುವ 'ಸ್ತ್ರೀ ಸಾಮರ್ಥ್ಯ ಯೋಜನೆ' ಗೆ ಚಾಲನೆ ನೀಡಲಾಗಿದೆ. ಸುಮಾರು 5 ಲಕ್ಷ ಮಹಿಳೆಯರ ಸ್ವಾವಲಂಬನೆಗೆ ಎಂಡ್ ಟು ಎಂಡ್ ನೆರವು ನೀಡಲಾಗುತ್ತಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ :


ರಾಜ್ಯದ ಸುಮಾರು 28 ಸಾವಿರ ಗ್ರಾಮಗಳಲ್ಲಿ ತಲಾ ಒಂದು ಒಂದು ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸಿ, ಯುವಕರಿಗೂ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆ. ಇದರಿಂದ 5 ಲಕ್ಷ ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗುವ ಅವಕಾಶ ಕಲ್ಪಿಸಲಾಗುವುದು.


ಪುಣ್ಯಕೋಟ ದತ್ತು ಯೋಜನೆ :


ಗೋವುಗಳ ಸಂರಕ್ಷಣೆಯಲ್ಲಿ ಜನರ ಪಾಲುದಾರಿಕೆಯನ್ನು ಉತ್ತೇಜಿಸಲು ಪುಣ್ಯಕೋಟಿ ದತ್ತು ಯೋಜನೆ ಜಾರಿ, ಈ ಯೋಜನೆಗೆ ಸಂಬಂಧಿಸಿದ ವೆಬ್ಬೆಟ್ ನ ಲೋಕಾರ್ಪಣೆ. ಪ್ರತಿಯೊಬ್ಬ ವ್ಯಕ್ತಿಯೂ ವಾರ್ಷಿಕ 11000 ರೂ. ಪಾವತಿಸಿ, ಒಂದು ಗೋವಿನ ಒಂದು ವರ್ಷದ ನಿರ್ವಹಣೆಯನ್ನು ಮಾಡಬಹುದಾಗಿದೆ. ಅವರೇ ಗೋವುಗಳನ್ನು ದತ್ತು ತೆಗೆದುಕೊಳ್ಳಬಹುದು, ಅಥವಾ 11,000 ಮೊತ್ತ ಪಾವತಿಸಿದ್ದಲ್ಲಿ ಸರ್ಕಾರದ ಗೋ ಶಾಲೆಗಳಲ್ಲಿ ಗೋವುಗಳ ರಕ್ಷಣೆಗೆ ಈ ಮೊತ್ತವನ್ನು ಬಳಸಿಕೊಳ್ಳಲಾಗುವುದು.


ವಿದ್ಯಾನಿಧಿ ಯೋಜನೆ :


ನೇಕಾರರ ಮಕ್ಕಳಿಗೆ ವಿದ್ಯಾನಿಧಿ : ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, 10 - 12 ಸಾವಿರ ಮಕ್ಕಳಿಗೆ ಈ ಯೋಜನೆಯ ಲಾಭ ದೊರೆಯಲಿದೆ.


ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ : ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದ್ದು, ಈ ಎಲ್ಲ ಕಾರ್ಯಕ್ರಮ ಸರ್ಕಾರದ ಆದೇಶಗಳನ್ನು ಹೊರಡಿಸಲಾಗಿದ್ದು, ಅನುದಾನದ ವ್ಯವಸ್ಥೆಯನ್ನೂ ಮಾಡಲಾಗಿದೆ. ಈ ಎಲ್ಲ ವಿದ್ಯಾನಿಧಿ ಯೋಜನೆಗಳಿಗೆ ಇಂದು ಚಾಲನೆ ನೀಡಲಾಗಿದೆ.


ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಥಿ : ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದ್ದು, 50,000 ಟ್ಯಾಕ್ಸಿ ಚಾಲಕ ಮಕ್ಕಳಿಗೆ ಈ ಯೋಜನೆಯ ಲಾಭ ದೊರೆಯಲಿದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ




ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕರ್ನಾಟಕ ಸರ್ಕಾರದ ಪ್ರಮುಖ 5 ಯೋಜನೆಗಳು

Previous
« Prev Post

No comments:

Post a Comment

My Blog List

Followers

Popular Posts