ನಿರೀಕ್ಷಕರ ಹುದ್ದೆ: ಪರೀಕ್ಷೆ ಹೇಗಿರುತ್ತದೆ?
(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)
ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೂ ಕೆಪಿಎಸ್ ಸಿ ಕನ್ನಡದ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ನೇಮಕ ಮಾಡಿಕೊಳ್ಳುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 50 ಅಂಕ, ಸ್ಪರ್ಧಾತ್ಮಕ ಪರೀಕ್ಷೆಯ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇಕಡಾ 35ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಎಸ್ಸೆಸ್ಸೆಲ್ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡದ ಪಠ್ಯ ಕ್ರಮವನ್ನು ಮಾನದಂಡವನ್ನಾಗಿಟ್ಟು ಕೊಂಡು ಪ್ರಶ್ನೆಪತ್ರಿಕೆಯನ್ನು ಸಿದ್ಧಪಡಿಸಲಾಗುತ್ತದೆ.
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ಸ್ಪರ್ಧಾತ್ಮಕ ಪರೀಕ್ಷೆ: ಸ್ಪರ್ಧಾತ್ಮಕ ಪರೀಕ್ಷೆ ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಪತ್ರಿಕೆಯು ಗರಿಷ್ಠ 100 ಅಂಕಗಳೊಂದಿಗೆ ಲಿಖಿತ ಪ್ರಶ್ನೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿರುತ್ತವೆ. ಈ ಎರಡು ಪತ್ರಿಕೆಗಳಲ್ಲಿ ತಪ್ಪು ಉತ್ತರಗಳಿಗೆ ಋಣಾತ್ಮಕ (ನೆಗೆಟಿವ್) ಅಂಕಗಳನ್ನು ಪರಿಗಣಿಸಿ ಅಭ್ಯರ್ಥಿ ಗಳಿಸುವ ಒಟ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ಅಂದರೆ ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ 1/4 (ನಾಲ್ಕನೇ ಒಂದು ಭಾಗದಷ್ಟು) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಅಭ್ಯರ್ಥಿಗಳು ಎರಡು ಪತ್ರಿಕೆಗಳ ಪರೀಕ್ಷೆಗಳಿಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ.
ಪತ್ರಿಕೆ ಮತ್ತು ಪಠ್ಯಕ್ರಮ
ಅಭ್ಯರ್ಥಿಗಳ ಗಮನಕ್ಕೆ: ಗಣಕಯಂತ್ರದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದಲ್ಲಿ ಅಭ್ಯರ್ಥಿಗಳಿಗೆ ಈ ಸಂಬಂಧ ಸೂಚನೆಗಳನ್ನು ಮತ್ತು ಅಣಕು ಪರೀಕ್ಷೆಯನ್ನು (ಮಾಕ್ ಟೆಸ್ಟ್) ತೆಗೆದುಕೊಳ್ಳುವ ಬಗ್ಗೆ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಪಠ್ಯಕ್ರಮದ ವಿವರವೂ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ಪತ್ರಿಕೆ 1: ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ 100 ಅಂಕಗಳ ಪ್ರಶ್ನೆಗಳಿರುತ್ತವೆ. ಬರೆಯಲು 1 ಗಂಟೆ 30 ನಿಮಿಷ ಕಾಲಾವಕಾಶವಿರುತ್ತದೆ. ಈ ಪತ್ರಿಕೆಯ ಪಠ್ಯಕ್ರಮ 15 ವಿಷಯಗಳನ್ನೊಳಗೊಂಡಿರುತ್ತದೆ. ಪ್ರಚಲಿತ ಘಟನೆಗಳಿಗೆ ಸಂಬಂಧಿಸಿದ ಸಾಮಾನ್ಯ ಜ್ಞಾನ, ಸಾಮಾನ್ಯ ವಿಜ್ಞಾನ, ಭೂಗೋಳಶಾಸ್ತ್ರ, ಸಮಾಜ ವಿಜ್ಞಾನ, ಭಾರತೀಯ ಸಮಾಜ ಮತ್ತು ಅದರ ಬೆಳವಣಿಗೆಗಳ ಇತಿಹಾಸ, ಭಾರತದ ಮತ್ತು ಕರ್ನಾಟಕದ ಇತಿಹಾಸ, ಭಾರತ ಸಂವಿಧಾನ ಮತ್ತು ಸಾರ್ವಜನಿಕ ಆಡಳಿತ, ಪ್ರಾಯೋಗಿಕ ಜ್ಞಾನ ಮತ್ತು ಬೌದ್ಧಿಕ ಸಾಮರ್ಥ್ಯ (ಎಸ್ಸೆಸ್ಸೆಲ್ಸಿ ಮಟ್ಟದ) ಕರ್ನಾಟಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಇತಿಹಾಸ, ಸ್ವಾತಂತ್ರ್ಯ ನಂತರದಲ್ಲಿ ಕರ್ನಾಟಕದ ಭೂ ಸುಧಾರಣೆಗಳು ಮತ್ತು ಸಾಮಾಜಿಕ ಬದಲಾವಣೆಗಳು, ಕರ್ನಾಟಕದ ಅರ್ಥ ವ್ಯವಸ್ಥೆ, ಅದರ ಸಾಮರ್ಥ್ಯ, ದೌರ್ಬಲ್ಯತೆಯ ಪ್ರಸ್ತುತ ಸ್ಥಿತಿಗತಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ಗ್ರಾಮೀಣ ಸಹಕಾರ ಸಂಸ್ಥೆಗಳು, ಕರ್ನಾಟಕ ಪರಿಣಾಮಕಾರಿ ಆಡಳಿತಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರ ಕುರಿತ ವಿಷಯ, ಕರ್ನಾಟಕ ಪರಿಸರ ಸಂಬಂಧಿ ಸಮಸ್ಯೆಗಳು ಮತ್ತು ಅಭಿವೃದ್ಧಿ, ಬೌದ್ಧಿಕ ಸಾಮರ್ಥ್ಯದ ವಿಷಯವನ್ನೊಳಗೊಂಡಂತೆ ಪ್ರಶ್ನೆಗಳಿರುತ್ತವೆ.
ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು
ಪತ್ರಿಕೆ 2: ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ವಿಷಯವನ್ನು ಒಳಗೊಂಡಿರುತ್ತದೆ. ಈ ವಿಷಯಗಳಿಗೆ ಸಂಬಂಧಿಸಿದ 100 ಅಂಕಗಳ ಪ್ರಶ್ನೆಗಳಿರುತ್ತವೆ. 2 ಗಂಟೆ ಸಮಯಾವಕಾಶವಿರುತ್ತದೆ. ಇದರಲ್ಲಿ ಸಾಮಾನ್ಯ ಕನ್ನಡ ಮತ್ತು ಸಾಮಾನ್ಯ ಇಂಗ್ಲಿಷ್ ತಲಾ 35 ಅಂಕಗಳ ಪ್ರಶ್ನೆಗಳಿರುತ್ತವೆ. ಕಂಪ್ಯೂಟರ್ ಜ್ಞಾನದ 30 ಪ್ರಶ್ನೆಗಳು ಸೇರಿದಂತೆ ಒಟ್ಟು 100 ಅಂಕಗಳ ಪ್ರಶ್ನೆಗಳಿಗೆ ಉತ್ತರಿಸಲು 2 ಗಂಟೆ ಕಾಲಾವಕಾಶವಿರಲಿದೆ.
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment