General Knowledge in Kannada

"PYADAVGK - ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತ ಸಾಮಾನ್ಯ ಜ್ಞಾನ (GK) ಮತ್ತು ಅಧ್ಯಯನ ಸಾಮಗ್ರಿಗಳು. ಕರ್ನಾಟಕ ಪರೀಕ್ಷೆ, UPSC, KPSC, SSC,PDO,FDA,SDA,PSI,POLICE ಮತ್ತು ಬ್ಯಾಂಕ್ ಪರೀಕ್ಷೆಗಳಿಗೆ ಪ್ರಚಲಿತGK ಮತ್ತು ದಿನನಿತ್ಯದ ಕ್ವಿಜ್ ಅನ್ನು ಇಲ್ಲಿ ಪಡೆಯಿರಿ!"

Search This Blog

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Saturday, May 4, 2024

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕ ಪ್ರಕ್ರಿಯೆ 2024 | ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, May 4, 2024

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಗ್ರೂಪ್ ಸಿ ವೃಂದದ 486 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಮೇ 28 ಕೊನೆಯ ದಿನವಾಗಿದೆ. ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ಸಂಬಂಧಿಸಿದಂತೆ ಪದವೀಧರರಿಗೆ ಮತ್ತು ಪದವಿ ಕಳಗಿನ ಡಿಪ್ಲೊಮಾ ವಿದ್ಯಾರ್ಹತೆ ಇರುವವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪದವಿ ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗಾಗಿ ಉಳಿಕೆ ಮತ್ತು ಮೂಲ ವೃಂದದ ಹುದ್ದೆಗಳಿಗಾಗಿ ನಾಲ್ಕು ಪ್ರತ್ಯೇಕ ಅಧಿಸೂಚನೆಗಳನ್ನು ಕೆಪಿಎಸ್‌ಸಿ ಪ್ರಕಟಿಸಿದೆ.

 

(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

Download Link given below Click & download

ಪದವಿ ವಿದ್ಯಾರ್ಹತೆ: ಕೈಗಾರಿಕಾ ಮತ್ತು ವಾಣಿಜ್ಯ

ಇಲಾಖೆಯಲ್ಲಿನ ಕೈಗಾರಿಕಾ 63 (13 ಹೈ.ಕ.) ವಿಸ್ತರಣಾಧಿಕಾರಿ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ವ್ಯಾಪ್ತಿಯಲ್ಲಿನ 13 (3 ಹೈಕ) ಗ್ರಂಥಪಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇಲ್ಲಿನ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಬಿನ್ನೆಸ್ ಅಡ್ಮಿನಿಸ್ಟೇಷನ್ ಸೇರಿದಂತೆ ಯಾವುದೇ ವಿಷಯದಲ್ಲಿ ಪದವಿ ಪಡೆದಿ ದ್ದರೂ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಂಥಪಾಲಕ ಹುದ್ದೆಗಳಿಗೆ ಲೈಬ್ರರಿ ಸೈನ್ಸ್‌ನಲ್ಲಿ ಪದವಿ ಪೂರ್ಣ ಗೊಳಿಸಿದವರು ಅರ್ಜಿ ಸಲ್ಲಿಸುವ ಅವಕಾಶವಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಐಟಿಐ/ ಪಿಯುಸಿ/ಡಿಪ್ಲೊಮಾ ಉಳಿಕೆ ಮೂಲ ವೃಂದದಲ್ಲಿ ಜಲಸಂಪನ್ಮೂಲ ಇಲಾಖೆ ಕಿರಿಯ ಎಂಜಿನಿಯರ್ (ಸಿವಿಲ್, ಮೆಕಾನಿಕಲ್)-300 ಹುದ್ದೆಗಳು ಮತ್ತು ಸಾರ್ವಜನಿಕ ಗ್ರಂಥಾಲಯದಲ್ಲಿನ ಸಹಾಯಕ ಗ್ರಂಥಪಾಲಕ 13 ಹುದ್ದೆಗಳಿಗೆ ನೇಮ ಕಾತಿ ನಡೆಯಲಿದೆ. ಇನ್ನು ಹೈದರಾಬಾದ್ ಕರ್ನಾಟಕ ವಿಭಾಗಕ್ಕೆ ಒಟ್ಟು 97 ಹುದ್ದೆಗಳನ್ನು ಮೀಸಲಿಡ

ಲಾಗಿದೆ. ಅದರಂತೆ ಅಂತರ್ಜಲ ನಿರ್ದೇಶನಾಲಯ, ಪೌರಾಡಳಿತ ನಿರ್ದೇಶನಾಲಯ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 41 ಕಿರಿಯ ಎಂಜಿನಿಯರ್ ಹುದ್ದೆಗಳು ಖಾಲಿ ಇವೆ. ಪೌರಾಡಳಿತ ನಿರ್ದೇಶನಾಲಯದಲ್ಲಿ 4 ನೀರು ಸರಬರಾಜುದಾರರು. 5 ಸಹಾಯಕ ನೀರು ಸರಬರಾಜುದಾರರು, 39 ಕಿರಿಯ ಆರೋಗ್ಯ ನಿರೀಕ್ಷಕರು ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ 8 ಸಹಾಯಕ ಗ್ರಂಥಪಾಲಕ ಹುದ್ದೆಗಳಿವೆ.

ಅರ್ಹತೆ: ಮೆಕಾನಿಕಲ್, ಎಲೆಕ್ಟಿಕಲ್, ಸಿವಿಲ್

ವಿಭಾಗದಲ್ಲಿ ಕಿರಿಯ ಎಂಜಿನಿಯರ್ ಹುದ್ದೆಗಳಿದ್ದು, ಆಯಾ ఎంజినియరింగ్ ವಿಭಾಗದಲ್ಲಿ - ಡಿಪ್ಲೊಮಾ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಲು ಅರ್ಹ 'ರಾಗಿರುತ್ತಾರೆ. ಹಾಗೆಯೇ ಲೈಬ್ರರಿ ಸೈನ್ಸ್‌ ನಲ್ಲಿ ಡಿಪ್ಲೊಮಾ ಪಡೆದವರು ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಪ್ರಯತ್ನಿಸಬಹುದು.

ನೀರು ಸರಬರಾಜುದಾರರ ಹುದ್ದೆಗಳ ಆಕಾಂಕ್ಷಿಗಳು ಎಸ್ಸೆಸ್ಸೆಲ್ಸಿ ಮತ್ತು ಎಲೆಕ್ಟಿಕಲ್/ಫಿಟ್ಟರ್ - ಟ್ರೇಡ್‌ನಲ್ಲಿ ಐಟಿಐ ಹಾಗೂ ಒಂದು ವರ್ಷದ ಟ್ರೇಡ್ ಅಪ್ರೆಂಟಿಸ್ ಷಿಪ್ ಪಡೆದಿರಬೇಕು. ಸಹಾಯಕ ನೀರು ಸರಬರಾಜುದಾರರ ಹುದ್ದೆಗೆ ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019


ಸ್ಕ್ಯಾನ್ ಮಾಡಿದ ಪ್ರತಿ: ಹೌದು

> ಅರ್ಜಿ ಸಲ್ಲಿಸಲು ಮೇ 28 ಕೊನೆ ದಿನ

>> ಐಟಿಐ, ಪಿಯುಸಿ, ಡಿಪ್ಲೊಮಾ, ಪದವೀಧರರಿಗೆ ಅವಕಾಶ

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆಗು] down

: 080-30574957/30574901

► : www.kpsc.kar.nic.in

ವಯೋಮಿತಿ: ಗ್ರೂಪ್ ಸಿ ವೃಂದದಿ

ಎಲ್ಲಾ ಹುದ್ದೆಗಳಿಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಒಂದೇ ರೀತಿಯಾಗಿದೆ. 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ 38 ವರ್ಷಗಳು ಮತ್ತು ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ

ಅಭ್ಯರ್ಥಿಗಳಿಗೆ 600 ರೂ., ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ವರ್ಗದ ಅಭ್ಯರ್ಥಿಗಳಿಗೆ 300 ರೂ. ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ ಸಂಪೂರ್ಣಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಎಸ್ಸೆಸ್ಸೆಲ್ಸಿ, ಮತ್ತು ಐಟಿಐ (ಫಿಟ್ಟರ್ /ಎಲೆಕ್ಟಿಕಲ್) ವಿದ್ಯಾರ್ಹತೆ ಇದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಕಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್/ಹೆಲ್ತ್ ಇನ್ಸ್‌ಪೆಕ್ಟ‌ರ್ ವಿಷಯಗಳಲ್ಲಿ ಡಿಪ್ಲೊಮಾ ಅಥವಾ ಪಿಯುಸಿ ತೇರ್ಗಡೆಯಾಗಿ ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್/ಹಲ್ತ್ ಇನ್ಸ್‌ಪೆಕ್ಟರ್ ವಿಷಯಗಳಲ್ಲಿ ಡಿಪ್ಲೊಮಾ ಪಡದಿದ್ದರೂ ಅರ್ಜಿ ಸಲ್ಲಿಸಬಹುದಾಗಿದೆ.

ವೈಯಕ್ತಿಕ ಬಳಕೆಗೆ ಮಾತ್ರ

 

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕ ಪ್ರಕ್ರಿಯೆ 2024 | ಗ್ರೂಪ್ ಸಿ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ.

Previous
« Prev Post

No comments:

Post a Comment

My Blog List

Followers

Popular Posts